Philippians 
ಪೌಲನು ಫಿಲಿಪ್ಪಿಯವರಿಗೆ ಬರೆದ ಪತ್ರಿಕೆ  
 ೧
ಪೀಠಿಕೆ 
 ೧ ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ * 2 ಕೊರಿ. 1:1; ಕೊಲೊ. 1:2ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ † ಅ. ಕೃ. 20:28; 1 ತಿಮೊ. 3:1-7; ತೀತ. 1:6-9ಸಭಾಧ್ಯಕ್ಷರಿಗೂ ಹಾಗೂ ‡ 1 ತಿಮೊ. 3:8,12ಸಭಾಸೇವಕರಿಗೂ ಬರೆಯುವುದೇನೆಂದರೆ,  ೨ ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ. 
ಕೃತಜ್ಞತಾಸ್ತುತಿಯೂ ಪ್ರಾರ್ಥನೆಗಳೂ 
 ೩-೪  § ರೋಮಾ. 1:9; ಎಫೆ. 1:16ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.  ೫ ನೀವು ಮೊದಲಿನಿಂದ ಇಂದಿನವರೆಗೂ * ಫಿಲಿ. 2:12; 4:15; ಅ. ಕೃ. 16:12-40ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು † ರೋಮಾ. 1:8ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.  ೬ ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ‡ ಕೀರ್ತ. 138:8; 1 ಥೆಸ. 5:24ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.  ೭ ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. § ಅ. ಕೃ. 20:23; 26:29; ಕೊಲೊ. 4:18; 2 ತಿಮೊ. 2:9; ಎಫೆ. 3:1ನಾನು ಬಂಧನದಲ್ಲಿರುವಾಗಲೂ, * ವ. 16ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು † 2 ಕೊರಿ. 7:3ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.  ೮ ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ‡ ಫಿಲಿ. 4:1; ರೋಮಾ. 1:11; 1 ಥೆಸ. 3:6; 2 ತಿಮೊ. 1:4ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. § ರೋಮಾ. 1:9; 9:1ಇದಕ್ಕೆ ದೇವರೇ ಸಾಕ್ಷಿ.  ೯ ಮತ್ತು * 1 ಥೆಸ. 3:12; 2 ಥೆಸ. 1:3ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ † ಕೊಲೊ. 1:9; 3:10; ಫಿಲೆ. 6ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.  ೧೦ ಹೀಗೆ ‡ ರೋಮಾ. 2:18ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು § 1 ಥೆಸ. 3:13; 5:23ಸರಳರಾಗಿಯೂ, ನಿರ್ಮಲರಾಗಿಯೂ,  ೧೧ ಯೇಸು ಕ್ರಿಸ್ತನ ಮೂಲಕವಾಗಿರುವ * ಕೊಲೊ. 1:6,10; ಯಾಕೋಬ 3:18ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು † ಎಫೆ. 1:12,14ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ. 
ಸುವಾರ್ತೆಯ ಅಭಿವೃದ್ಧಿ 
 ೧೨ ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.  ೧೩  ‡ ಲೂಕ. 21:13ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು § ಅ. ಕೃ. 28:30,31; 2 ಕೊರಿ. 2:9ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.  ೧೪ ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ * ಅ. ಕೃ. 4:31ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.  ೧೫  † 2 ಕೊರಿ. 11:13ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.  ೧೬ ಇವರಂತೂ ನಾನು ‡ ವ. 7ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.  ೧೭ ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು § ಫಿಲಿ. 2:3; ಯಾಕೋಬ 3:14ಪ್ರಸಿದ್ಧಿಪಡಿಸುತ್ತಾರೆ.  ೧೮ ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.  ೧೯ ಯಾಕೆಂದರೆ * 2 ಕೊರಿ. 1:11ನಿಮ್ಮ ವಿಜ್ಞಾಪನೆಯಿಂದಲೂ ಮತ್ತು † ಅ. ಕೃ. 16:7; ಗಲಾ. 3:5ಯೇಸುಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.  ೨೦ ಹೇಗೆಂದರೆ ‡ ರೋಮಾ. 5:5; 2 ತಿಮೊ. 2:15ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ § ರೋಮಾ. 14:8ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ * 1 ಕೊರಿ. 6:20ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.  ೨೧  † ಗಲಾ. 2:20ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.  ೨೨ ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.  ೨೩  ‡ 2 ಕೊರಿ. 5:8ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, § 2 ತಿಮೊ. 4:6ಇಲ್ಲಿಂದ ಹೊರಟು * ಯೋಹಾ. 12:26ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.  ೨೪ ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.  ೨೫ ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ † ರೋಮಾ. 15:13ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.  ೨೬ ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ‡ 2 ಕೊರಿ. 1:14ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು. 
ಕ್ರೈಸ್ತರು ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಬೇಕೆಂಬ ಬೋಧನೆ 
 ೨೭  § ಎಫೆ. 4:1ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ* 1 ಕೊರಿ. 16:13 ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ † ಫಿಲಿ. 2:2ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.  ೨೮ ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ‡ ಅ. ಕೃ. 14:22ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.  ೨೯ ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ § ಮತ್ತಾ 5:12; ಅ. ಕೃ. 14:22ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.  ೩೦ ಹೀಗೆ ನೀವು * ಅ. ಕೃ. 16:19-40ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ † ಕೊಲೊ. 1:29; 2:1ಅದೇ ಹೋರಾಟವು ನಿಮಗೂ ಉಂಟು. 
†೧:೧ ಅ. ಕೃ. 20:28; 1 ತಿಮೊ. 3:1-7; ತೀತ. 1:6-9
‡೧:೧ 1 ತಿಮೊ. 3:8,12
*೧:೫ ಫಿಲಿ. 2:12; 4:15; ಅ. ಕೃ. 16:12-40
†೧:೫ ರೋಮಾ. 1:8
‡೧:೬ ಕೀರ್ತ. 138:8; 1 ಥೆಸ. 5:24
§೧:೭ ಅ. ಕೃ. 20:23; 26:29; ಕೊಲೊ. 4:18; 2 ತಿಮೊ. 2:9; ಎಫೆ. 3:1
*೧:೭ ವ. 16
‡೧:೮ ಫಿಲಿ. 4:1; ರೋಮಾ. 1:11; 1 ಥೆಸ. 3:6; 2 ತಿಮೊ. 1:4
§೧:೮ ರೋಮಾ. 1:9; 9:1
*೧:೯ 1 ಥೆಸ. 3:12; 2 ಥೆಸ. 1:3
‡೧:೧೦ ರೋಮಾ. 2:18
§೧:೧೦ 1 ಥೆಸ. 3:13; 5:23
*೧:೧೧ ಕೊಲೊ. 1:6,10; ಯಾಕೋಬ 3:18
§೧:೧೩ ಅ. ಕೃ. 28:30,31; 2 ಕೊರಿ. 2:9
‡೧:೧೬ ವ. 7
§೧:೧೭ ಫಿಲಿ. 2:3; ಯಾಕೋಬ 3:14
†೧:೧೯ ಅ. ಕೃ. 16:7; ಗಲಾ. 3:5
‡೧:೨೦ ರೋಮಾ. 5:5; 2 ತಿಮೊ. 2:15
§೧:೨೦ ರೋಮಾ. 14:8
†೧:೨೧ ಗಲಾ. 2:20
§೧:೨೩ 2 ತಿಮೊ. 4:6
†೧:೨೫ ರೋಮಾ. 15:13
†೧:೨೭ ಫಿಲಿ. 2:2
§೧:೨೯ ಮತ್ತಾ 5:12; ಅ. ಕೃ. 14:22