122
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. ರಚನೆಗಾರ: ದಾವೀದ. 
 1 “ಯೆಹೋವನ ಆಲಯಕ್ಕೆ ಹೋಗೋಣ” 
ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು. 
 2 ನಾವು ಜೆರುಸಲೇಮಿನ ಬಾಗಿಲುಗಳ ಬಳಿಯಲ್ಲಿ ನಿಂತಿದ್ದೇವೆ. 
 3 ಇದು ಹೊಸ ಜೆರುಸಲೇಮ್! 
ಈ ಪಟ್ಟಣವು ಏಕೀಕರಣಗೊಂಡ ನಗರದಂತೆ ಮತ್ತೆ ಕಟ್ಟಲ್ಪಟ್ಟಿದೆ. 
 4 ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು 
ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು. 
 5 ದಾವೀದನ ಕುಟುಂಬದ ರಾಜರುಗಳು ಜನರಿಗೆ 
ನ್ಯಾಯತೀರ್ಪು ನೀಡಲು ತಮ್ಮ ಸಿಂಹಾಸನಗಳನ್ನು ಅಲ್ಲಿ ಸ್ಥಾಪಿಸಿದರು. 
 6 ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: 
“ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ. 
 7 ನಿನ್ನ ಕೋಟೆಗಳೊಳಗೆ ಶಾಂತಿ ನೆಲಸಿರಲಿ 
ನಿನ್ನ ಮಹಾ ಕಟ್ಟಡಗಳಲ್ಲಿ ಸುರಕ್ಷತೆಯಿರಲಿ.” 
 8 ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ 
ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು. 
 9 ನಮ್ಮ ದೇವರಾದ ಯೆಹೋವನ ಆಲಯಕ್ಕೋಸ್ಕರ 
ಈ ಪಟ್ಟಣಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸುವೆನು.