67
ಸ್ತುತಿಗೀತೆ. 
 1 ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. 
ಪ್ರಸನ್ನಮುಖದಿಂದ ನಮ್ಮನ್ನು ನೋಡು. 
 2 ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. 
ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ. 
 3 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! 
ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ! 
 4 ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. 
ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; 
ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ. 
 5 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! 
ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ! 
 6 ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. 
ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ. 
 7 ಆತನು ನಮ್ಮನ್ನು ಆಶೀರ್ವದಿಸಲಿ. 
ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ.