125
ಯೆಹೋವನೇ ವಿಶ್ವಾಸಿಗಳ ಆಶ್ರಯ 
ಯಾತ್ರಾಗೀತೆ. 
 1 ಯೆಹೋವನಲ್ಲಿ ಭರವಸೆ ಇಡುವವರು, 
ಚೀಯೋನ್ ಪರ್ವತದ ಹಾಗೆ ಇದ್ದಾರೆ; 
ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ. 
 2 ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, 
ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು. 
 3 ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; 
ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು. 
 4 ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, 
ಆಗಿರುವವರಿಗೆ ಉಪಕಾರಮಾಡು. 
 5 ಯೆಹೋವನು ಡೊಂಕುದಾರಿ ಹಿಡಿದವರನ್ನು, 
ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. 
ಇಸ್ರಾಯೇಲರಿಗೆ ಶುಭವುಂಟಾಗಲಿ.