113
1 ಯೆಹೋವನಿಗೆ ಸ್ತೋತ್ರವಾಗಲಿ! 
ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! 
ಆತನ ಹೆಸರನ್ನು ಕೊಂಡಾಡಿರಿ. 
2 ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ. 
3 ಪೂರ್ವದಿಂದಿಡಿದು ಪಶ್ಚಿಮದವರೆಗೂ 
ಯೆಹೋವನ ಹೆಸರು ಸ್ತುತಿಸಲ್ಪಡಲಿ. 
4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; 
ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ. 
5 ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ. 
ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ. 
6 ಆತನು ಆಕಾಶವನ್ನೂ 
ಭೂಮಿಯನ್ನೂ ಬಾಗಿ ನೋಡುವನು. 
7 ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; 
ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು. 
8 ಆತನು ಅವರನ್ನು ಪ್ರಮುಖರನ್ನಾಗಿಯೂ 
ನಾಯಕರುಗಳನ್ನಾಗಿಯೂ ಮಾಡುವನು. 
9 ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ 
ಸಂತೋಷಪಡಿಸುವನು. 
ಯೆಹೋವನಿಗೆ ಸ್ತೋತ್ರವಾಗಲಿ!