129
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. 
1 ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. 
ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು. 
2 ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. 
ಆದರೆ ಅವರೆಂದೂ ಗೆಲ್ಲಲಿಲ್ಲ. 
3 ನನ್ನ ಬೆನ್ನಿನ ಮೇಲೆ ಹೊಡೆದು 
ಹೊಲವನ್ನು ಉಳುವಂತೆ ಗಾಯ ಮಾಡಿದರು. 
4 ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ 
ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು. 
5 ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. 
ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು. 
6 ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. 
ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು. 
7 ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ 
ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ. 
8 ಅವರ ಸಮೀಪದಲ್ಲಿ ನಡೆದುಹೋಗುವವರು, 
“ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. 
“ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” 
ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.