1ಯೆಹೋವನಿಗೆ ಸ್ತೋತ್ರವಾಗಲಿ!
ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ!
ಆತನ ಹೆಸರನ್ನು ಕೊಂಡಾಡಿರಿ.
2ಯೆಹೋವನ ಹೆಸರು ಇಂದಿಗೂ ಎಂದೆಂದಿಗೂ ಸ್ತುತಿಸಲ್ಪಡಲಿ.
3ಪೂರ್ವದಿಂದಿಡಿದು ಪಶ್ಚಿಮದವರೆಗೂ
ಯೆಹೋವನ ಹೆಸರು ಸ್ತುತಿಸಲ್ಪಡಲಿ.
4ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ;
ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ.
5ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ.
ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ.
6ಆತನು ಆಕಾಶವನ್ನೂ
ಭೂಮಿಯನ್ನೂ ಬಾಗಿ ನೋಡುವನು.
7ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು;
ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು.
8ಆತನು ಅವರನ್ನು ಪ್ರಮುಖರನ್ನಾಗಿಯೂ
ನಾಯಕರುಗಳನ್ನಾಗಿಯೂ ಮಾಡುವನು.
9ಆತನು ಬಂಜೆಗೆ ಮಕ್ಕಳನ್ನು ಅನುಗ್ರಹಿಸಿ
ಸಂತೋಷಪಡಿಸುವನು.
ಯೆಹೋವನಿಗೆ ಸ್ತೋತ್ರವಾಗಲಿ!