1ಯೆಹೋವನಿಗೆ ಸ್ತೋತ್ರವಾಗಲಿ!
ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ!
ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!
2ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ!
ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ!
3ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ!
ಹಾರ್ಪ್‌ವಾದ್ಯಗಳನ್ನೂ ಲೈರ್‌ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ.
4ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ.
ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
5ತಾಳಗಳಿಂದ ಆತನನ್ನು ಸ್ತುತಿಸಿರಿ!
ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ!
6ಸಮಸ್ತ ಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ!
ಯೆಹೋವನಿಗೆ ಸ್ತೋತ್ರವಾಗಲಿ!