22
“ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಅದನ್ನು ಕೊಯಿದರೆ ಅಥವಾ ಮಾರಿದರೆ, ಅವನು ತಾನು ಕದ್ದ ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನೂ ಅಥವಾ ತಾನು ಕದ್ದ ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನೂ ಕೊಡಬೇಕು. 2-4 ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲಿಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು.
“ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.
“ಒಬ್ಬನು ತನ್ನ ಹೊಲದಲ್ಲಾಗಲಿ ದ್ರಾಕ್ಷಿತೋಟದಲ್ಲಾಗಲಿ ತನ್ನ ಪಶುವಿಗೆ ಮೇಯಲು ಬಿಡಬಹುದು. ಆದರೆ ಅದು ಅವನ ನೆರೆಯವನ ಹೊಲವನ್ನಾಗಲಿ, ದ್ರಾಕ್ಷಿತೋಟವನ್ನಾಗಲಿ ಹಾಳು ಮಾಡಿದರೆ, ಅವನು ತನ್ನ ನೆರೆಯವನಿಗೆ ಉಂಟಾದ ನಷ್ಟಕ್ಕೆ ಪ್ರತಿಯಾಗಿ ತನ್ನ ಉತ್ತಮ ಬೆಳೆಗಳನ್ನು ಕೊಡಬೇಕು.
“ಒಬ್ಬನು ತನ್ನ ಹೊಲದಲ್ಲಿರುವ ಮುಳ್ಳಿನ ಪೊದೆಗಳನ್ನು ಸುಟ್ಟುಹಾಕಲು ಬೆಂಕಿಯನ್ನು ಹೊತ್ತಿಸಬಹುದು. ಆದರೆ ಬೆಂಕಿಯು ಹೆಚ್ಚಾಗಿ ಅವನ ನೆರೆಯವನ ಬೆಳೆಯನ್ನಾಗಲಿ ಬೆಳೆಯುತ್ತಿರುವ ಧಾನ್ಯಗಳನ್ನಾಗಲಿ ಸುಟ್ಟುಹಾಕಿದರೆ ಬೆಂಕಿಯನ್ನು ಹೊತ್ತಿಸಿದವನು ತಾನು ಸುಟ್ಟುಹಾಕಿದ ವಸ್ತುಗಳಿಗೆ ಪ್ರತಿಯಾಗಿ ಈಡುಕೊಡಬೇಕು.
“ಒಬ್ಬನು ತನ್ನ ನೆರೆಯವನ ಮನೆಯಲ್ಲಿ ಸ್ವಲ್ಪ ಹಣವನ್ನಾಗಲಿ ವಸ್ತುಗಳನ್ನಾಗಲಿ ಇಟ್ಟಿದ್ದು, ಆ ಹಣವಾಗಲಿ ವಸ್ತುಗಳಾಗಲಿ ಕಳುವಾದರೆ ಕಳ್ಳನನ್ನು ಕಂಡುಹಿಡಿಯಲು ನೀವು ಪ್ರಯತ್ನಿಸಬೇಕು. ನೀವು ಕಳ್ಳನನ್ನು ಕಂಡುಹಿಡಿದರೆ, ಆಗ ಅವನು ತಾನು ಕದ್ದವಸ್ತುಗಳ ಬೆಲೆಯ ಎರಡರಷ್ಟನ್ನು ಕೊಡಬೇಕು. ಆದರೆ ನೀವು ಕಳ್ಳನನ್ನು ಕಂಡುಹಿಡಿಯಲಾಗದಿದ್ದರೆ, ಆ ಮನೆಯ ಮಾಲಿಕನು ತಪ್ಪಿತಸ್ಧನಾಗಿದ್ದಾನೋ ಇಲ್ಲವೋ ಎಂದು ದೇವರು* ದೇವರು ಕೆಲವೊಮ್ಮೆ ನ್ಯಾಯಾಧಿಪತಿಗಳನ್ನು ದೇವರು ಎಂದು ಕರೆಯಲಾಗುತ್ತಿತ್ತು. ನಿರ್ಣಯಿಸುವನು. ಮನೆಯ ಮಾಲಿಕನು ದೇವರ ಸನ್ನಿಧಿಗೆ ಹೋಗಬೇಕು. ಅವನು ಕದ್ದಿದ್ದಾನೋ ಇಲ್ಲವೋ ಎಂದು ದೇವರು ತೀರ್ಮಾನಿಸುವನು.
“ಕಳೆದುಹೋದ ಎತ್ತು, ಕತ್ತೆ, ಕುರಿ, ಬಟ್ಟೆಬರೆ, ಅಥವಾ ವಸ್ತುವಿನ ವಿಷಯದಲ್ಲಿ ಒಬ್ಬನು, ‘ಇದು ನನ್ನದು’ ಎಂದು ಹೇಳಿದರೆ ಮತ್ತು ಇನ್ನೊಬ್ಬನು, ‘ಇಲ್ಲ, ಇದು ನನ್ನದು’ ಎಂದು ಹೇಳಿದರೆ, ಇವರಿಬ್ಬರೂ ದೇವರ ಸನ್ನಿಧಿಗೆ ಹೋಗಬೇಕು. ತಪ್ಪಿತಸ್ಥನಾರೆಂದು ದೇವರು ತೀರ್ಮಾನಿಸುವನು. ತಪ್ಪಿತಸ್ಥನು ಇನ್ನೊಬ್ಬನಿಗೆ ಕಳೆದುಹೋದ ವಸ್ತುವಿನ ಬೆಲೆಯ ಎರಡರಷ್ಟನ್ನು ಕೊಡಬೇಕು.
10 “ಸ್ವಲ್ಪಕಾಲದವರೆಗೆ ತನ್ನ ಪಶುವನ್ನು ಪೋಷಿಸಬೇಕೆಂದು ತನ್ನ ನೆರೆಯವನನ್ನು ಕೇಳಿಕೊಳ್ಳಬಹುದು. ಈ ಪಶುವು ಕತ್ತೆಯಾಗಿರಬಹುದು, ಎತ್ತಾಗಿರಬಹುದು, ಕುರಿಯಾಗಿರಬಹುದು ಅಥವಾ ಯಾವುದೇ ಪಶುವಾಗಿರಬಹುದು. ಆದರೆ ಅದು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅಥವಾ ಕಳುವಾದರೆ, 11 ಆ ನೆರೆಯವನು ಆ ಪಶುವನ್ನು ಕದ್ದಿಲ್ಲದ್ದಿದ್ದರೆ ತಾನು ಕದ್ದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಬೇಕು. ಪಶುವಿನ ಮಾಲಿಕನು ಈ ಪ್ರಮಾಣವನ್ನು ಸ್ವೀಕರಿಸಬೇಕು. ನೆರೆಯವನು ಮಾಲಿಕನಿಗೆ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ. 12 ಆದರೆ ಪಶುವು ಕದಿಯಲ್ಪಟ್ಟಿದ್ದರೆ, ಅವನು ಅದಕ್ಕಾಗಿ ಈಡು ಕೊಡಬೇಕು. 13 ಕ್ರೂರಪ್ರಾಣಿಗಳು ಆ ಪಶುವನ್ನು ಕೊಂದುಹಾಕಿದ್ದರೆ, ನೆರೆಯವನು ಸತ್ತ ಪಶುವನ್ನು ಸಾಕ್ಷಿಯಾಗಿ ತರಬೇಕು. ನೆರೆಯವನು ಮಾಲಿಕನಿಗೆ ಸತ್ತ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.
14 “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಸ್ವಲ್ಪಕಾಲಕ್ಕೆ ಸಾಲವಾಗಿ ತೆಗೆದುಕೊಂಡಿರುವಾಗ ಅದರ ಮಾಲಿಕನು ಅದರ ಸಮೀಪದಲ್ಲಿ ಇಲ್ಲದಿರುವ ಸಮಯದಲ್ಲಿ ಆ ಪಶುವಿಗೆ ಗಾಯವಾದರೆ ಅಥವಾ ಅದು ಸತ್ತುಹೋದರೆ, ಸಾಲ ತೆಗೆದುಕೊಂಡವನು ಆ ಪಶುವಿಗೆ ಈಡುಕೊಡಬೇಕು. 15 ಆದರೆ ಅದರ ಮಾಲಿಕನು ಪಶುವಿನೊಂದಿಗೆ ಅಲ್ಲಿದ್ದರೆ ಆಗ ನೆರೆಯವನು ಈಡುಕೊಡಬೇಕಾಗಿಲ್ಲ. ನೆರೆಯವನು ಪಶುವನ್ನು ಬಾಡಿಗೆಗೆ ತೆಗೆದುಕೊಂಡಿರುವಾಗ ಆ ಪಶು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅವನು ಈಡುಕೊಡಬೇಕಾಗಿಲ್ಲ. ಆ ಪಶುವನ್ನು ಉಪಯೋಗಿಸಲು ಅವನು ಕೊಟ್ಟ ಬಾಡಿಗೆಯೇ ಸಾಕು.
16 “ಒಬ್ಬನು ಕನ್ನಿಕೆಯನ್ನು ಮರುಳುಗೊಳಿಸಿ ಕೂಡಿದರೆ, ಅವನು ಅವಳನ್ನು ಮದುವೆಯಾಗಬೇಕು. ಅವನು ಆಕೆಯ ತಂದೆಗೆ ತಕ್ಕ ತೆರವನ್ನು ಕೊಡಬೇಕು. 17 ತಂದೆಯು ತನ್ನ ಮಗಳನ್ನು ಅವನಿಗೆ ಕೊಡಲು ನಿರಾಕರಿಸಿದರೂ ಅವನು ತೆರವನ್ನು ಕೊಡಬೇಕು. ಅವನು ಅವಳಿಗೋಸ್ಕರ ಪೂರ್ಣ ತೆರವನ್ನು ಕೊಡಬೇಕು.
18 “ಮಾಟಗಾರ್ತಿಯನ್ನು ನೀವು ಜೀವಸಹಿತ ಉಳಿಸಬಾರದು.
19 “ಪಶುಸಂಗ ಮಾಡಿದವನಿಗೆ ಮರಣದಂಡನೆಯಾಗಬೇಕು.
20 “ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನಾಶ ಕೈಮೀರಿಹೋದ ವಸ್ತುಗಳನ್ನಾಗಲಿ ವ್ಯಕ್ತಿಗಳನ್ನಾಗಲಿ ಯೆಹೋವನ ದಂಡನೆಗೆ ಒಪ್ಪಿಸುವುದನ್ನು ಇದು ಸೂಚಿಸುತ್ತದೆ. ಅನೇಕ ಸಲ, ಇದು ಸಂಪೂರ್ಣ ನಾಶದಿಂದಾಗಲಿ ಮರಣಶಿಕ್ಷೆಯಿಂದಾಗಲಿ ಕೊನೆಗೊಳ್ಳುತ್ತಿತ್ತು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.
21 “ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.
22 “ನೀವೆಂದಿಗೂ ವಿಧವೆಯರಿಗೆ ಅಥವಾ ಅನಾಥ ಮಕ್ಕಳಿಗೆ ಕೇಡುಮಾಡಬಾರದು. 23 ನೀವು ಆ ವಿಧವೆಯರಿಗೆ ಅಥವಾ ಅನಾಥರಿಗೆ ಕೇಡುಮಾಡಿದರೆ, ನಾನು ಅವರ ಗೋಳಾಟವನ್ನು ಕೇಳಿ, 24 ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.
25 “ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು. 26 ಯಾವನಾದರೂ ನೀವು ಕೊಟ್ಟ ಸಾಲಕ್ಕೆ ತನ್ನ ಅಂಗಿಯನ್ನು ಒತ್ತೆಯಾಗಿಟ್ಟರೆ, ಸೂರ್ಯನು ಮುಳುಗುವ ಮೊದಲೇ ನೀವು ಆ ಅಂಗಿಯನ್ನು ಅವನಿಗೆ ಹಿಂತಿರುಗಿಸಬೇಕು. 27 ಯಾಕೆಂದರೆ ಅವನಿಗೆ ಬೇರೆ ಯಾವ ಹೊದಿಕೆಯೂ ಇಲ್ಲ; ಅದನ್ನೇ ಅವನು ಧರಿಸಿಕೊಳ್ಳಬೇಕು. ಅವನು ಮಲಗಿಕೊಳ್ಳುವಾಗ ಚಳಿಯಿಂದ ನನಗೆ ಮೊರೆಯಿಟ್ಟರೆ, ನಾನು ಅವನ ಮೊರೆಯನ್ನು ಕೇಳಿ ಅವನಿಗೆ ದಯೆತೋರುವೆನು.
28 “ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.
29 “ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು.
“ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು. 30 ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.
31 “ನೀವು ನನ್ನ ವಿಶೇಷ ಜನರಾಗಿದ್ದೀರಿ. ಆದ್ದರಿಂದ ಕ್ರೂರಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಮಾಂಸವನ್ನು ನೀವು ತಿನ್ನಬಾರದು. ಅದನ್ನು ನಾಯಿಗಳು ತಿನ್ನಲಿ.

*22:8: ದೇವರು ಕೆಲವೊಮ್ಮೆ ನ್ಯಾಯಾಧಿಪತಿಗಳನ್ನು ದೇವರು ಎಂದು ಕರೆಯಲಾಗುತ್ತಿತ್ತು.

22:20: ನಾಶ ಕೈಮೀರಿಹೋದ ವಸ್ತುಗಳನ್ನಾಗಲಿ ವ್ಯಕ್ತಿಗಳನ್ನಾಗಲಿ ಯೆಹೋವನ ದಂಡನೆಗೆ ಒಪ್ಪಿಸುವುದನ್ನು ಇದು ಸೂಚಿಸುತ್ತದೆ. ಅನೇಕ ಸಲ, ಇದು ಸಂಪೂರ್ಣ ನಾಶದಿಂದಾಗಲಿ ಮರಣಶಿಕ್ಷೆಯಿಂದಾಗಲಿ ಕೊನೆಗೊಳ್ಳುತ್ತಿತ್ತು.