೧೪
ಅನ್ಯಭಾಷೆಗಳನ್ನಾಡುವ, ಪ್ರವಾದಿಸುವ ವರ
೧ ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು * 1 ಕೊರಿ. 12:1, 31ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ. ೨  1 ಕೊರಿ. 14:18-23,27,28ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ೩ ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು. ೪ ಅನ್ಯಭಾಷೆಗಳನ್ನಾಡುವವನು ತನಗೆ ತಾನೇ ಆತ್ಮಿಕ ವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ, ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟು ಮಾಡುತ್ತಾನೆ. ೫ ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ಅರಣ್ಯ. 11:29ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು. ೬ ಆದರೆ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು? ೭ ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದಗಳಲ್ಲಿ ಯಾವ ವ್ಯತ್ಯಾಸವನ್ನೂ ತೋರಿಸದಿದ್ದರೆ; ನುಡಿಸಿದ ವಾದ್ಯ ಇಂಥದ್ದೇ ಎಂದು ಹೇಗೆ ತಿಳಿಯುವುದು? ೮ ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು? ೯ ಹಾಗೆಯೇ ನೀವೂ ಸಹ ಸ್ಪಷ್ಟವಾದ ಭಾಷೆಯನ್ನು ನಿಮ್ಮ ಬಾಯಿಂದ ಮಾತನಾಡದೆ ಹೋದರೆ, ನಿಮ್ಮ ಮಾತಿನ ಅರ್ಥವನ್ನು ಹೇಗೆ ತಿಳಿದುಕೊಳ್ಳಲು ಸಾಧ್ಯ? § 1 ಕೊರಿ. 9:26ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ. ೧೦ ಲೋಕದಲ್ಲಿ ಅನೇಕ ಭಾಷೆಗಳಿವೆ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದವುಗಳಿಲ್ಲ. ೧೧ ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನಂತಿರುತ್ತಾನೆ. ೧೨ ಹಾಗೆಯೇ ನೀವು ಆತ್ಮಿಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ. ೧೩ ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ. ೧೪ ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು. ೧೫ ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; * ಎಫೆ. 5:19; ಕೊಲೊ. 3:16ಆತ್ಮನಿಂದ ಹಾಡುವೆನು, ಕೀರ್ತ 47:7ಬುದ್ಧಿಯಿಂದಲೂ ಹಾಡುವೆನು. ೧೬ ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು 2 ಪೂರ್ವ. 16:36; ನೆಹೆ. 8:6; ಕೀರ್ತ 106:48; ಪ್ರಕ. 5:14 ಆಮೆನ್ ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಲಿಯದಲ್ಲವೇ? ೧೭ ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ. ೧೮ ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರನ್ನು ಕೊಂಡಾಡುತ್ತೇನೆ. ೧೯ ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ. ೨೦ ಪ್ರಿಯರೇ, ಬಾಲಕರಂತೆ § ಎಫೆ. 4:14; ಇಬ್ರಿ. 5:12,13ಆಲೋಚಿಸಬೇಡಿರಿ; * ಯೆಶಾ. 28:9; ರೋಮಾ. 16:19; ಮತ್ತಾ 18:3ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; 1 ಕೊರಿ. 2:6; ಎಫೆ. 4:13ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.
೨೧  ಯೆಶಾ. 28:11,12ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿದೆ. ೨೨ ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ. ೨೩ ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, § ಅ. ಕೃ. 2:13ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ? ೨೪ ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು, ೨೫  * ಇಬ್ರಿ. 4:12ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ಯೆಶಾ. 45:14; ಜೆಕ. 8:23ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.
ಸಭೆಯಲ್ಲಿ ಎಲ್ಲರೂ ಕ್ರಮದಿಂದ ನಡೆಯಬೇಕೆಂಬ ಬೋಧನೆ
೨೬ ಹಾಗಾದರೇನು, ಪ್ರಿಯರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ. ೨೭ ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ೨೮ ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ. ೨೯ ಇಬ್ಬರು ಮೂವರು ಪ್ರವಾದಿಗಳು ಮಾತನಾಡಲಿ, ಮಿಕ್ಕಾದವರು 1 ಕೊರಿ. 12:10; ಯೋಹಾ 4:1ವಿವೇಚನೆಯಿಂದ ಕೇಳಲಿ. ೩೦ ಕುಳಿತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ ೩೧ ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು. ೩೨ ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ. ೩೩  § ವ. 40ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.
೩೪ ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ * 1 ತಿಮೊ. 2:11; 12ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಆದಿ. 3:16ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ. ೩೫ ಅವರು ಏನಾದರೂ ತಿಳಿದು ಕೊಳ್ಳುವುದಕ್ಕೆ ಅಪೇಕ್ಷಿಸಿದರೆ ಮನೆಯಲ್ಲಿ ತಮ್ಮ ಗಂಡಂದಿರನ್ನು ಕೇಳಿಕೊಳ್ಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ಅಪಮಾನಕರವಾದದ್ದು. ೩೬ ದೇವರ ವಾಕ್ಯವು ನಿಮ್ಮಿಂದಲೇ ಹೊರಟಿತೋ? ನಿಮಗೆ ಮಾತ್ರವೇ ಬಂದಿತೋ? ೩೭ ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮಿಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ. ೩೮ ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ. ೩೯ ಆದಕಾರಣ ನನ್ನ ಪ್ರಿಯರೇ, 1 ಕೊರಿ. 12:31ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ. ೪೦  § 1 ಕೊರಿ. 14:31,33ಆದರೆ ಎಲ್ಲವೂ ಯೋಗ್ಯವಾಗಿಯೂ ಹಾಗೂ ಕ್ರಮದಿಂದಲೂ ನಡೆಯಲಿ.

*೧೪:೧ 1 ಕೊರಿ. 12:1, 31

೧೪:೨ 1 ಕೊರಿ. 14:18-23,27,28

೧೪:೫ ಅರಣ್ಯ. 11:29

§೧೪:೯ 1 ಕೊರಿ. 9:26

*೧೪:೧೫ ಎಫೆ. 5:19; ಕೊಲೊ. 3:16

೧೪:೧೫ ಕೀರ್ತ 47:7

೧೪:೧೬ 2 ಪೂರ್ವ. 16:36; ನೆಹೆ. 8:6; ಕೀರ್ತ 106:48; ಪ್ರಕ. 5:14

§೧೪:೨೦ ಎಫೆ. 4:14; ಇಬ್ರಿ. 5:12,13

*೧೪:೨೦ ಯೆಶಾ. 28:9; ರೋಮಾ. 16:19; ಮತ್ತಾ 18:3

೧೪:೨೦ 1 ಕೊರಿ. 2:6; ಎಫೆ. 4:13

೧೪:೨೧ ಯೆಶಾ. 28:11,12

§೧೪:೨೩ ಅ. ಕೃ. 2:13

*೧೪:೨೫ ಇಬ್ರಿ. 4:12

೧೪:೨೫ ಯೆಶಾ. 45:14; ಜೆಕ. 8:23

೧೪:೨೯ 1 ಕೊರಿ. 12:10; ಯೋಹಾ 4:1

§೧೪:೩೩ ವ. 40

*೧೪:೩೪ 1 ತಿಮೊ. 2:11; 12

೧೪:೩೪ ಆದಿ. 3:16

೧೪:೩೯ 1 ಕೊರಿ. 12:31

§೧೪:೪೦ 1 ಕೊರಿ. 14:31,33