೧೫
ಕ್ರಿಸ್ತನು ಎದ್ದು ಬಂದನೆಂಬುದಕ್ಕೆ ಸಾಕ್ಷಿಗಳು
೧ ಪ್ರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, * ರೋಮಾ. 5:2ಅದರಲ್ಲಿ ನಿಂತಿದ್ದೀರಿ. ೨ ನಾನು ನಿಮಗೆ ಸಾರಿದ 1 ಕೊರಿ. 1:18ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ. ೩  1 ಕೊರಿ. 11:23; ಗಲಾ. 1:12ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; ೪  § ಯೆಶಾ. 53:8,9; ಜೆಕ. 13:7ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು. ೫ ಅನಂತರ * ಲೂಕ 24:34ಕೇಫನಿಗೂ ಮಾರ್ಕ. 16:14; ಲೂಕ 24:36; ಯೋಹಾ 20:19,26ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು. ೬  ಮತ್ತಾ 28:17ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ§ ಸತ್ತು ಹೋಗಿದ್ದಾರೆ ಹೋಗಿದ್ದಾರೆ. ೭ ತರುವಾಯ ಆತನು ಯಾಕೋಬನಿಗೂ ಅನಂತರ ಎಲ್ಲಾ * ಲೂಕ. 24:50; ಅ. ಕೃ. 1:3-4ಅಪೊಸ್ತಲರಿಗೂ ಕಾಣಿಸಿಕೊಂಡನು. ೮  1 ಕೊರಿ. 9:1ಕಟ್ಟಕಡೆಗೆ, ದಿನತುಂಬದೆ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡನು. ೯  ಎಫೆ. 3:7,8; 2 ಕೊರಿ. 12:11; 1 ತಿಮೊ. 1:13-16ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; § ಅ. ಕೃ. 8:3ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ. ೧೦ ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಪಲವಾಗಲಿಲ್ಲ. * 1 ಕೊರಿ. 11:23; 12:11; ಕೊಲೊ. 1:29ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. 1 ಕೊರಿ. 3:6; 2 ಕೊರಿ. 3:5ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ. ೧೧ ಆದ್ದರಿಂದ ನಾನಾದರೇನು ಅಥವಾ ಅವರಾದರೇನು, ಈ ರೀತಿಯಾಗಿ ನಾವೆಲ್ಲರೂ ಸುರ್ವಾತೆಯನ್ನು ಸಾರಿದ್ದೇವೆ; ಅದನ್ನು ನೀವು ನಂಬಿದಿರಿ.
ಕ್ರಿಸ್ತನನ್ನು ನಂಬಿದವರು ಎದ್ದು ಬರುವರು
೧೨ ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಅ. ಕೃ. 23:8; 2 ತಿಮೊ. 2:18ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ? ೧೩ ಸತ್ತವರಿಗೆ ಪುನರುತ್ಥಾನವಿಲ್ಲವೆಂಬುದು ನಿಜವಾಗಿದ್ದರೆ ಕ್ರಿಸ್ತನು ಸಹ ಎದ್ದುಬರಲಿಲ್ಲ. ೧೪ ಕ್ರಿಸ್ತನೂ ಎದ್ದುಬರಲಿಲ್ಲವಾದರೆ ನಮ್ಮ ಬೋಧನೆಯು ವ್ಯರ್ಥ ಮತ್ತು ನಿಮ್ಮ ನಂಬಿಕೆಯು ಸಹ ವ್ಯರ್ಥವಾದದ್ದು. ೧೫ ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; § ಅ. ಕೃ. 2:24ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು. ೧೬ ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ. ೧೭ ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ * ರೋಮಾ. 4:25ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ. ೧೮ ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ. ೧೯ ಕ್ರಿಸ್ತನಲ್ಲಿ ನಮಗಿರುವ ನಿರೀಕ್ಷೆಯು ಕೇವಲ ಈ ಬದುಕಿಗೆ ಮಾತ್ರ ಸೀಮಿತವಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ಹೀನರಾಗುತ್ತೇವೆ.
೨೦  2 ತಿಮೊ. 2:8; 1 ಪೇತ್ರ 1:3ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ವ. 23; ಅ. ಕೃ. 26:23ಪ್ರಥಮಫಲವಾದನು. ೨೧  § ರೋಮಾ. 5:12 ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ. ೨೨ ಆದಾಮನಿಂದ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು. ೨೩ ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು. ೨೪ ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. ೨೫ ಯಾಕೆಂದರೆ * ಕೀರ್ತ 110:1; 8:6ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ. ೨೬  2 ತಿಮೊ. 1:10ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ. ೨೭ ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ. ಆದರೆ ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ. ೨೮ ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ 1 ಕೊರಿ. 3:23; 11:3ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.
೨೯ ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ. ೩೦  § 2 ಕೊರಿ. 11:26ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ? ೩೧ ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ * 1 ಥೆಸ. 2:19ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ ಲೂಕ. 9:23; ರೋಮಾ. 8:36ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. ೩೨ ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ಯೆಶಾ. 22:13ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. ೩೩ ಮೋಸಹೋಗಬೇಡಿರಿ; § 1 ಕೊರಿ. 5:6ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ. ೩೪ ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; * 1 ಕೊರಿ. 6:5ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.
ಸತ್ತವರು ಯಾವ ಸ್ಥಿತಿಯಲ್ಲಿ ಎದ್ದು ಬರುವರೆಂಬುದನ್ನು ಕುರಿತದ್ದು
೩೫ ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಪಡೆದಿರುತ್ತಾರೆ? ಎಂದು ಯಾರಾದರೂ ಪ್ರಶ್ನಿಸಬಹುದು. ೩೬ ಮೂರ್ಖನೇ; ಯೋಹಾ. 12:24ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ. ೩೭ ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ. ೩೮ ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ. ೩೯ ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ. ೪೦ ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ. ೪೧ ಸೂರ್ಯನ ತೇಜಸ್ಸು ಒಂದು ವಿಧವಾದರೆ, ಚಂದ್ರನ ಪ್ರಕಾಶವೇ ಮತ್ತೊಂದು ವಿಧ, ಹಾಗೆಯೇ ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.
೪೨ ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು. ೪೩ ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಫಿಲಿ. 3:21; ಕೊಲೊ. 3:4ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು; ೪೪ ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮಿಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮಿಕ ದೇಹವೂ ಇರುವುದು ಸತ್ಯ. ೪೫  § ಆದಿ. 2:7ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. * ರೋಮಾ. 5:14 ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು. ೪೬ ಆತ್ಮಿಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮಿಕವಾದದ್ದು. ೪೭ ಮೊದಲನೆಯ ಮನುಷ್ಯನು ಆದಿ. 2:7; 3:19ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. ೪೮ ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ § ಫಿಲಿ. 3:20ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. ೪೯ ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ * ರೋಮಾ. 8:29ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.
೫೦ ಪ್ರಿಯರೇ, ನಾನು ಹೇಳುವುದೇನಂದರೆ, ಯೋಹಾ 3:3-5ರಕ್ತಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ೫೧ ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, 1 ಥೆಸ. 4:15-17ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. ೫೨ ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ § ಫಿಲಿ. 3:21ಮಾರ್ಪಡುವೆವು. ಹೌದು, * ಮತ್ತಾ 24:31; 1 ಥೆಸ. 4:16ತುತ್ತೂರಿಯು ಮೊಳಗಿ ಯೋಹಾ 5:25, 28ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು. ೫೩ ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, 2 ಕೊರಿ. 5:2-4ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ. ೫೪ ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. ೫೫  § ಹೋಶೇ. 13:14ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ? ೫೬ ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ. ೫೭  * ರೋಮಾ. 8:37; 1 ಯೋಹಾ 5:4ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ. ೫೮ ಆದ್ದರಿಂದ, ನನ್ನ ಪ್ರಿಯರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ಗಲಾ. 6:9; 1 ಕೊರಿ. 3:8ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.

*೧೫:೧ ರೋಮಾ. 5:2

೧೫:೨ 1 ಕೊರಿ. 1:18

೧೫:೩ 1 ಕೊರಿ. 11:23; ಗಲಾ. 1:12

§೧೫:೪ ಯೆಶಾ. 53:8,9; ಜೆಕ. 13:7

*೧೫:೫ ಲೂಕ 24:34

೧೫:೫ ಮಾರ್ಕ. 16:14; ಲೂಕ 24:36; ಯೋಹಾ 20:19,26

೧೫:೬ ಮತ್ತಾ 28:17

§೧೫:೬ ಸತ್ತು ಹೋಗಿದ್ದಾರೆ

*೧೫:೭ ಲೂಕ. 24:50; ಅ. ಕೃ. 1:3-4

೧೫:೮ 1 ಕೊರಿ. 9:1

೧೫:೯ ಎಫೆ. 3:7,8; 2 ಕೊರಿ. 12:11; 1 ತಿಮೊ. 1:13-16

§೧೫:೯ ಅ. ಕೃ. 8:3

*೧೫:೧೦ 1 ಕೊರಿ. 11:23; 12:11; ಕೊಲೊ. 1:29

೧೫:೧೦ 1 ಕೊರಿ. 3:6; 2 ಕೊರಿ. 3:5

೧೫:೧೨ ಅ. ಕೃ. 23:8; 2 ತಿಮೊ. 2:18

§೧೫:೧೫ ಅ. ಕೃ. 2:24

*೧೫:೧೭ ರೋಮಾ. 4:25

೧೫:೨೦ 2 ತಿಮೊ. 2:8; 1 ಪೇತ್ರ 1:3

೧೫:೨೦ ವ. 23; ಅ. ಕೃ. 26:23

§೧೫:೨೧ ರೋಮಾ. 5:12

*೧೫:೨೫ ಕೀರ್ತ 110:1; 8:6

೧೫:೨೬ 2 ತಿಮೊ. 1:10

೧೫:೨೮ 1 ಕೊರಿ. 3:23; 11:3

§೧೫:೩೦ 2 ಕೊರಿ. 11:26

*೧೫:೩೧ 1 ಥೆಸ. 2:19

೧೫:೩೧ ಲೂಕ. 9:23; ರೋಮಾ. 8:36

೧೫:೩೨ ಯೆಶಾ. 22:13

§೧೫:೩೩ 1 ಕೊರಿ. 5:6

*೧೫:೩೪ 1 ಕೊರಿ. 6:5

೧೫:೩೬ ಯೋಹಾ. 12:24

೧೫:೪೩ ಫಿಲಿ. 3:21; ಕೊಲೊ. 3:4

§೧೫:೪೫ ಆದಿ. 2:7

*೧೫:೪೫ ರೋಮಾ. 5:14

೧೫:೪೫

೧೫:೪೭ ಆದಿ. 2:7; 3:19

§೧೫:೪೮ ಫಿಲಿ. 3:20

*೧೫:೪೯ ರೋಮಾ. 8:29

೧೫:೫೦ ಯೋಹಾ 3:3-5

೧೫:೫೧ 1 ಥೆಸ. 4:15-17

§೧೫:೫೨ ಫಿಲಿ. 3:21

*೧೫:೫೨ ಮತ್ತಾ 24:31; 1 ಥೆಸ. 4:16

೧೫:೫೨ ಯೋಹಾ 5:25, 28

೧೫:೫೩ 2 ಕೊರಿ. 5:2-4

§೧೫:೫೫ ಹೋಶೇ. 13:14

*೧೫:೫೭ ರೋಮಾ. 8:37; 1 ಯೋಹಾ 5:4

೧೫:೫೮ ಗಲಾ. 6:9; 1 ಕೊರಿ. 3:8