೧೬
ಯೇಸುವಿನ ಪುನರುತ್ಥಾನ
(ಮತ್ತಾಯನು 28:1-8; ಲೂಕ 24:1-10; ಯೋಹಾ. 20:1)
೧ ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು. ೨ ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.
೩ ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು? ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. ೪ ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. ೫ ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ಉಡುಪನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.
೬ ಅವನು ಅವರಿಗೆ, ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, ೭ ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ ಎಂದು ಹೇಳಿದನು.
೮ ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
೯  * ಯೋಹಾ 20:14-18:ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು. ೧೦ ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು. ೧೧ ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.
ಯೇಸು ಜೀವಿತನಾಗಿ ಎದ್ದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡಿದ್ದು
೧೨  ಲೂಕ 24:13, 15ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು. ೧೩ ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.
೧೪ ಅನಂತರ ಯೋಹಾ 20:19:ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು. ೧೫ ಆ ಮೇಲೆ ಅವರಿಗೆ, § ಮತ್ತಾಯನು 28:19:ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. ೧೬ ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
೧೭ ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; ೧೮ ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು ಎಂದು ಹೇಳಿದನು.
ಯೇಸು ಪರಲೋಕಕ್ಕೆ ಒಯ್ಯಲ್ಪಟ್ಟದ್ದು
೧೯ ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ * ಲೂಕ. 24:51; ಅ. ಕೃ. 1:9:ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು. ೨೦ ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಇಬ್ರಿ. 2:3, 4:ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಅ. ಕೃ. 5:12:ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು. § 9 ನೆಯ ವಚನದಿಂದ 20 ನೆಯ ವಚನದ ಪರ್ಯಂತರ ಬರೆದಿರುವ ಮಾತುಗಳು ಕೆಲವು ಪುರಾತನ ಪ್ರತಿಗಳಲ್ಲಿ ಇಲ್ಲ. ಕೆಲವು ಪ್ರತಿಗಳಲ್ಲಿ ಅವುಗಳಿಗೆ ಬದಲಾಗಿ ಬೇರೊಂದು ಸಮಾಪ್ತಿ ವಾಕ್ಯಗಳಿವೆ; ಅದೇನಂದರೆ- ಆದರೆ ತಮಗೆ ಆಜ್ಞಾಪಿಸಲ್ಪಟ್ಟ ಮಾತುಗಳನ್ನೆಲ್ಲಾ ಪೇತ್ರನ ಸಂಗಡವಿದ್ದವರಿಗೆ ಸಂಕ್ಷೇಪವಾಗಿ ತಿಳಿಸಿದರು. ತರುವಾಯ ಯೇಸು ತಾನೇ ನಿರಂತರವಾದ ರಕ್ಷಣೆಯನ್ನು ತಿಳಿಸುವ ಲಯವಾಗದ ದಿವ್ಯ ಪ್ರಕಟಣೆಯನ್ನು ಪೂರ್ವದಿಂದ ಪಶ್ಚಿಮದವರೆಗೂ ಇವರ ಮುಖಾಂತರ ಪ್ರಚುರಪಡಿಸಿದನು ಎಂಬುದೇ.

*೧೬:೯ ಯೋಹಾ 20:14-18:

೧೬:೧೨ ಲೂಕ 24:13, 15

೧೬:೧೪ ಯೋಹಾ 20:19:

§೧೬:೧೫ ಮತ್ತಾಯನು 28:19:

*೧೬:೧೯ ಲೂಕ. 24:51; ಅ. ಕೃ. 1:9:

೧೬:೨೦ ಇಬ್ರಿ. 2:3, 4:

೧೬:೨೦ ಅ. ಕೃ. 5:12:

§೧೬:೨೦ 9 ನೆಯ ವಚನದಿಂದ 20 ನೆಯ ವಚನದ ಪರ್ಯಂತರ ಬರೆದಿರುವ ಮಾತುಗಳು ಕೆಲವು ಪುರಾತನ ಪ್ರತಿಗಳಲ್ಲಿ ಇಲ್ಲ. ಕೆಲವು ಪ್ರತಿಗಳಲ್ಲಿ ಅವುಗಳಿಗೆ ಬದಲಾಗಿ ಬೇರೊಂದು ಸಮಾಪ್ತಿ ವಾಕ್ಯಗಳಿವೆ; ಅದೇನಂದರೆ- ಆದರೆ ತಮಗೆ ಆಜ್ಞಾಪಿಸಲ್ಪಟ್ಟ ಮಾತುಗಳನ್ನೆಲ್ಲಾ ಪೇತ್ರನ ಸಂಗಡವಿದ್ದವರಿಗೆ ಸಂಕ್ಷೇಪವಾಗಿ ತಿಳಿಸಿದರು. ತರುವಾಯ ಯೇಸು ತಾನೇ ನಿರಂತರವಾದ ರಕ್ಷಣೆಯನ್ನು ತಿಳಿಸುವ ಲಯವಾಗದ ದಿವ್ಯ ಪ್ರಕಟಣೆಯನ್ನು ಪೂರ್ವದಿಂದ ಪಶ್ಚಿಮದವರೆಗೂ ಇವರ ಮುಖಾಂತರ ಪ್ರಚುರಪಡಿಸಿದನು ಎಂಬುದೇ.