ಅಬ್ರಹಾಮನು ನಂಬಿಕೆಯಿಂದಲೇ ನೀತಿವಂತನಾದನೆಂಬ ವಾದ
೧ ಹಾಗಾದರೆ ವಂಶಾನುಕ್ರಮವಾಗಿ ನಮಗೆ * ಯೆಶಾ. 51:2; ರೋಮಾ. 4:16ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು? ೨ ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ 1 ಕೊರಿ. 1:31ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ. ೩ ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, ಆದಿ. 15:6; ರೋಮಾ. 4:9, 22; ಗಲಾ. 3:6; ಯಾಕೋಬ 2:23ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು ಎಂದು ಹೇಳುತ್ತದೆ. ೪ ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು. ೫ ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ § ರೋಮಾ. 3:22ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು. ೬ ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ, ೭  * ಕೀರ್ತ. 32:1ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು. ೮  2 ಕೊರಿ. 5:19ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು. ೯  ರೋಮಾ. 3:30ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? § ರೋಮಾ. 4:3ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು ಎಂಬುದಾಗಿ ನಾವು ಹೇಳುತ್ತೇವೆ. ೧೦ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು. ೧೧ ಅನಂತರ * ಆದಿ. 17:10,16ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ರೋಮಾ. 4:12,16ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು. ೧೨ ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
ನಂಬಿಕೆಯಿಂದ ವಾಗ್ದಾನವನ್ನು ಹೊಂದಿದ್ದು
೧೩  ಆದಿ. 17:4-6; 22:17,18ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ. ೧೪ ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು. ೧೫ ಯಾಕೆಂದರೆ § ರೋಮಾ. 7:7; 10:25; 2 ಕೊರಿ. 7:9; ಗಲಾ. 3:10ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ * ರೋಮಾ. 3:20; ಗಲಾ. 3:19ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ. ೧೬ ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೇಲ್ಲರ ತಂದೆಯಾದ ಗಲಾ. 3:22ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ. ೧೭  ಆದಿ. 17:5ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು § 1 ಕೊರಿ. 1:28ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕ್ಕೆಯಿಟ್ಟನು. ೧೮  * ಆದಿ. 15:5ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು. ೧೯  ಆದಿ. 17:17ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ಇಬ್ರಿ. 11:12ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ § ಆದಿ. 18:11ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ. ೨೦ ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. ೨೧ ದೇವರನ್ನು ಘನಪಡಿಸುವವನಾಗಿ * ಆದಿ. 18:14ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ನಂಬಿಕೆಯಿಂದಲೇ ಬಲಹೊಂದಿಪೂರ್ಣದೃಢತೆಯುಳ್ಳವನಾದನು. ೨೨ ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು. ೨೩ ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ರೋಮಾ. 15:4; 1 ಕೊರಿ. 9:9,10; 6:11; 2 ತಿಮೊ. 3:16,17ನಮಗೋಸ್ಕರವೂ ಬರೆದಿರುವುದು. ೨೪ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ § ಅ. ಕೃ. 2:24ಎಬ್ಬಿಸಿದ ದೇವರನ್ನು * ರೋಮಾ. 10:9; 1 ಪೇತ್ರ 1:21ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು. ೨೫  ರೋಮಾ. 5:6,8; 8:32; ಯೆಶಾ. 53:5,6; ಮತ್ತಾಯನು 20:28; ಗಲಾ. 1:4ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ರೋಮಾ. 5:18ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

*೪:೧ ಯೆಶಾ. 51:2; ರೋಮಾ. 4:16

೪:೨ 1 ಕೊರಿ. 1:31

೪:೩ ಆದಿ. 15:6; ರೋಮಾ. 4:9, 22; ಗಲಾ. 3:6; ಯಾಕೋಬ 2:23

§೪:೫ ರೋಮಾ. 3:22

*೪:೭ ಕೀರ್ತ. 32:1

೪:೮ 2 ಕೊರಿ. 5:19

೪:೯ ರೋಮಾ. 3:30

§೪:೯ ರೋಮಾ. 4:3

*೪:೧೧ ಆದಿ. 17:10,16

೪:೧೧ ರೋಮಾ. 4:12,16

೪:೧೩ ಆದಿ. 17:4-6; 22:17,18

§೪:೧೫ ರೋಮಾ. 7:7; 10:25; 2 ಕೊರಿ. 7:9; ಗಲಾ. 3:10

*೪:೧೫ ರೋಮಾ. 3:20; ಗಲಾ. 3:19

೪:೧೬ ಗಲಾ. 3:22

೪:೧೭ ಆದಿ. 17:5

§೪:೧೭ 1 ಕೊರಿ. 1:28

*೪:೧೮ ಆದಿ. 15:5

೪:೧೯ ಆದಿ. 17:17

೪:೧೯ ಇಬ್ರಿ. 11:12

§೪:೧೯ ಆದಿ. 18:11

*೪:೨೧ ಆದಿ. 18:14

೪:೨೧ ನಂಬಿಕೆಯಿಂದಲೇ ಬಲಹೊಂದಿ

೪:೨೩ ರೋಮಾ. 15:4; 1 ಕೊರಿ. 9:9,10; 6:11; 2 ತಿಮೊ. 3:16,17

§೪:೨೪ ಅ. ಕೃ. 2:24

*೪:೨೪ ರೋಮಾ. 10:9; 1 ಪೇತ್ರ 1:21

೪:೨೫ ರೋಮಾ. 5:6,8; 8:32; ಯೆಶಾ. 53:5,6; ಮತ್ತಾಯನು 20:28; ಗಲಾ. 1:4

೪:೨೫ ರೋಮಾ. 5:18