ಸತ್ತು ಜೀವಿತನಾಗಿ ಎದ್ದ ಕ್ರಿಸ್ತನಲ್ಲಿ ಐಕ್ಯವಾದವರು
೧ ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು. ೨  * ರೋಮಾ. 3:8; 6:11; 7:4,6; ಗಲಾ. 2:19; ಕೊಲೊ. 2:20; 3:3; 1 ಪೇತ್ರ 2:24ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ? ೩  ಗಲಾ. 3:27ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ೪ ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಕೊಲೊ. 2:12ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ § ರೋಮಾ. 6:9; 8:11; ಅ. ಕೃ. 2:24ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು * 2 ಕೊರಿ. 5:17; ಗಲಾ. 15; ಎಫೆ. 4:23,24; ಕೊಲೊ. 3:10ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ೫ ಹೇಗಂದರೆ ನಾವು ಆತನ ಮರಣಕ್ಕೆ ಫಿಲಿ. 3:10,11ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ೬ ನಮಗೆ ತಿಳಿದಿರುವಂತೆ, ನಮ್ಮ ಎಫೆ. 4:22; ಕೊಲೊ. 3:9ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು § ಗಲಾ. 2:20; 5:24; 6:14ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ. ೭  * ರೋಮಾ. 6:18ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ. ೮ ಇದಲ್ಲದೆ 2 ತಿಮೊ. 2:11; 2 ಕೊರಿ. 4:10; 13:4ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ. ೯ ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಅ. ಕೃ. 13:34; ಪ್ರಕ. 1:18ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ. ೧೦  § ಇಬ್ರಿ. 7:27ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ, ೧೧ ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ * ರೋಮಾ. 6:2ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.
ನಂಬಿದವರು ಪಾಪದ ದಾಸತ್ವದಿಂದ ಬಿಡುಗಡೆಯಾಗಿ ದೇವರಿಗೆ ದಾಸರಾಗುವರು
೧೨ ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ೧೩ ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ರೋಮಾ. 12:1ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ. ೧೪ ಯಾಕೆಂದರೆ ರೋಮಾ. 8:2; 12ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು § ನೇಮಗಳಿಗೆಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. ೧೫ ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು * ರೋಮಾ. 6:1ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. ೧೬ ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ರೋಮಾ. 6:20ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ ೧೭ ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, ೧೮  ರೋಮಾ. 6:22; 8:2ಪಾಪದಿಂದ ಬಿಡುಗಡೆಯನ್ನು ಹೊಂದಿ § ರೋಮಾ. 6:22ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ. ೧೯ ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು * ರೋಮಾ. 3:5ಲೋಕದ ರೀತಿಯಾಗಿ ಮಾತನಾಡುತ್ತೇನೆ. ರೋಮಾ. 6:13 ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ. ೨೦ ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ. ೨೧ ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ರೋಮಾ. 7:5ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. § ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? ೨೨ ಈಗಲಾದರೋ ನೀವು * ರೋಮಾ. 6:18ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ 1 ಕೊರಿ. 7:22; 1 ಪೇತ್ರ 2:16ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. ೨೩ ಯಾಕೆಂದರೆ ರೋಮಾ. 5:12; 2:8ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

*೬:೨ ರೋಮಾ. 3:8; 6:11; 7:4,6; ಗಲಾ. 2:19; ಕೊಲೊ. 2:20; 3:3; 1 ಪೇತ್ರ 2:24

೬:೩ ಗಲಾ. 3:27

೬:೪ ಕೊಲೊ. 2:12

§೬:೪ ರೋಮಾ. 6:9; 8:11; ಅ. ಕೃ. 2:24

*೬:೪ 2 ಕೊರಿ. 5:17; ಗಲಾ. 15; ಎಫೆ. 4:23,24; ಕೊಲೊ. 3:10

೬:೫ ಫಿಲಿ. 3:10,11

೬:೬ ಎಫೆ. 4:22; ಕೊಲೊ. 3:9

§೬:೬ ಗಲಾ. 2:20; 5:24; 6:14

*೬:೭ ರೋಮಾ. 6:18

೬:೮ 2 ತಿಮೊ. 2:11; 2 ಕೊರಿ. 4:10; 13:4

೬:೯ ಅ. ಕೃ. 13:34; ಪ್ರಕ. 1:18

§೬:೧೦ ಇಬ್ರಿ. 7:27

*೬:೧೧ ರೋಮಾ. 6:2

೬:೧೩ ರೋಮಾ. 12:1

೬:೧೪ ರೋಮಾ. 8:2; 12

§೬:೧೪ ನೇಮಗಳಿಗೆ

*೬:೧೫ ರೋಮಾ. 6:1

೬:೧೬ ರೋಮಾ. 6:20

೬:೧೮ ರೋಮಾ. 6:22; 8:2

§೬:೧೮ ರೋಮಾ. 6:22

*೬:೧೯ ರೋಮಾ. 3:5

೬:೧೯ ರೋಮಾ. 6:13

೬:೨೧ ರೋಮಾ. 7:5

§೬:೨೧ ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8

*೬:೨೨ ರೋಮಾ. 6:18

೬:೨೨ 1 ಕೊರಿ. 7:22; 1 ಪೇತ್ರ 2:16

೬:೨೩ ರೋಮಾ. 5:12; 2:8