೧೩
ಅಧಿಕಾರಸ್ಥರಿಗೆ ಅಧೀನರಾಗಬೇಕೆಂದು ಬೋಧನೆ
೧  * ತೀತ 3:1, 1 ಪೇತ್ರ. 2:13ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ಯೋಹಾ. 19:11ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು. ೨ ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು. ೩ ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು. ೪  2 ಪೂರ್ವ. 19:6ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ. ೫ ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು. ೬ ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. ೭  § ಮತ್ತಾ, 17:25, ಮಾರ್ಕ. 12:17ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯ ಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
ಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವುದು ಎಂಬ ಬೋಧನೆ
೮ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. * ರೋಮಾ. 13:10, ಮತ್ತಾಯನು 22:40, ಕೊಲೊ. 3:14. ಯೋಹಾ. 13:34ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ. ೯ ಹೇಗಂದರೆ ವಿಮೋ 20:13-17, ಮತ್ತಾ 19:18ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು. ಈ ಮೊದಲಾದ ಎಲ್ಲಾ ಕಟ್ಟಳೆಗಳು ಯಾಜ. 19:18ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ. ೧೦ ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. § ರೋಮಾ. 13:18, ಯೋಹಾ. 14:15ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.
೧೧  * 1 ಕೊರಿ. 15:34. ಎಫೆ. 5:14, 1 ಥೆಸ. 5:6ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ಯೆಶಾ. 56:1, ಲೂಕ. 21:28ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ. ೧೨ ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ 2 ಕೊರಿ. 6:7, ಎಫೆ. 6:11-13, 1 ಥೆಸ. 5:8ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ. ೧೩  § ಲೂಕ. 21:34,ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ * ಯಾಕೋಬ. 3:14-16ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ. ೧೪  ಗಲಾ. 5:16ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಗಲಾ. 21:34. ಕೊಲೊ. 3:10ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

*೧೩:೧ ತೀತ 3:1, 1 ಪೇತ್ರ. 2:13

೧೩:೧ ಯೋಹಾ. 19:11

೧೩:೪ 2 ಪೂರ್ವ. 19:6

§೧೩:೭ ಮತ್ತಾ, 17:25, ಮಾರ್ಕ. 12:17

*೧೩:೮ ರೋಮಾ. 13:10, ಮತ್ತಾಯನು 22:40, ಕೊಲೊ. 3:14. ಯೋಹಾ. 13:34

೧೩:೯ ವಿಮೋ 20:13-17, ಮತ್ತಾ 19:18

೧೩:೯ ಯಾಜ. 19:18

§೧೩:೧೦ ರೋಮಾ. 13:18, ಯೋಹಾ. 14:15

*೧೩:೧೧ 1 ಕೊರಿ. 15:34. ಎಫೆ. 5:14, 1 ಥೆಸ. 5:6

೧೩:೧೧ ಯೆಶಾ. 56:1, ಲೂಕ. 21:28

೧೩:೧೨ 2 ಕೊರಿ. 6:7, ಎಫೆ. 6:11-13, 1 ಥೆಸ. 5:8

§೧೩:೧೩ ಲೂಕ. 21:34,

*೧೩:೧೩ ಯಾಕೋಬ. 3:14-16

೧೩:೧೪ ಗಲಾ. 5:16

೧೩:೧೪ ಗಲಾ. 21:34. ಕೊಲೊ. 3:10